ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ

ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಉದ್ಯಮಿ ಸತೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಧನಾತ್ಮಕ ಶಕ್ತಿ ಇದೆ ಆದ್ದರಿಂದ ಎಲ್ಲರೂ ಭಾಗವಹಿಸಿ ಸಹಕಾರ ನೀಡುತ್ತಾರೆ ಎಂದರು.
ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಪ್ರಾಂಶುಪಾಲ ಪುಷ್ಪಲತಾ ಮಾತನಾಡಿ ಪಾಠದ ಜೊತೆಗೆ ಕ್ರೀಡೆಯ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಆವಾಗ ಮಕ್ಕಳು ದೈಹಿಕವಾಗಿ ಸದೃಢರಾಗುತ್ತಾರೆ ಎಂದರು.


ಕರಾವಳಿ ಕೋಪರೇಟಿವ್ ಸೊಸೈಟಿಯ ಅನಿಲ್ ಕುಮಾರ್, ಲಯನ್ಸ್ ಕ್ಲಬ್ ಲೀಡಿಯಾ ಡಿಸೋಜ, ಶಾಂತಾ ಶೆಟ್ಟಿ ಸಾಮಾಜಿಕ ಕಾರ್ಯಕರ್ತ ಜೂಡ್, ಕಣ್ಣೂರು ಸರಕಾರಿ ಶಾಲೆಯ ದೈಹಿಕ ಶಿಕ್ಷಕಿ ಆಲಿಸ್ ಪಾಯಸ್, ಬಬ್ಬುಕಟ್ಟೆ ಪೆರ್ಮನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪದ್ಯಾಯಿನಿ ಸವಿತಾ, ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವgದÀ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಫಕೀರ್ ನಾಯಕ್, , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಖಾಸಿಂ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಲಕ್ಷಿö್ಮ,
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮುಖ್ಯೋಪದ್ಯಾಯಿನಿ ಮಾಯಾ, ದೈಹಿಕ ಶಿಕ್ಷಕಿ ಶರ್ಮಿಳಾ, ಗುತ್ತಿಗೆದಾರರಾದ ರಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಶಾಲೆಗೆ ಸಹಕರಿಸಿದ ಧಾನಿಗಳನ್ನು ಸನ್ಮಾನಿಸಲಾಯಿತು.
ಶಿಕ್ಷಕ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು, ಮುಖ್ಯೋಪದ್ಯಾಯರಾದ ರಾಘವೇಂದ್ರ ರಾವ್ ಸ್ವಾಗತಿಸಿದರು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್ ಪ್ರಾಸ್ತವಿಕವಾಗಿ ಮಾತನಾಡಿದರು, ಶಿಕ್ಷಕ ಗಣೇಶ್ ಕೆ.ಕೆ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!