ಡಿ.14 ರಂದು ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ‘ಪೇಸ್ ಸಿಲ್ವಥಾನ್ 2025’ ಮಾದಕ ವಸ್ತು ವಿರೋಧಿ ಜಾಗೃತಿ ಮ್ಯಾರಥಾನ್ … !

ಮಂಗಳೂರು: ನಗರದ ನಡುಪದವಿನಲ್ಲಿರುವ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಹಾಗೂ ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಂಸ್ಥೆಗಳ ವತಿಯಿಂದ ಪೇಸ್ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ‘ಪೇಸ್ ಸಿಲ್ವಿಯೋರಾ’ ಆಚರಣೆಯ ಅಂಗವಾಗಿ ಪೇಸ್ ಸಿಲ್ವಥಾನ್ 2025- ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್ ಡಿ.14ರ ಬೆಳಗ್ಗೆ 6:30ರಿಂದ 8:30ರವರೆಗೆ ಆಯೋಜಿಸಲಾಗಿದೆ ಎಂದು ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಉಪ ಪ್ರಾಂಶುಪಾಲ ಡಾ.ಮುಹಮ್ಮದ್ ಮುಬೀನ್ ತಿಳಿಸಿದರು .

ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,ಮಾದಕ ವಸ್ತು ದುರುಪಯೋಗ ತಡೆಗಟ್ಟುವ, ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಿಲಾಗಿದೆ . ಮ್ಯಾರಥಾನ್ ಮಂಗಳೂರು ಪುರಭವನದಲ್ಲಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭಗೊಳ್ಳಲಿದ್ದು, ಅನಂತರ ಉರ್ವಾ ಮೈದಾನದ ವರೆಗೆ ಜಾಗೃತಿ ಓಟ ನಡೆಯಲಿದೆ ಎಂದು ತಿಳಿಸಿದರು.

ಈ ಮ್ಯಾರಥಾನ್‌ನಲ್ಲಿ ಸುಮಾರು 700 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಜೊತೆಗೆ ಮಂಗಳೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೂ ಈ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಿ.ಎ. ಎಜುಕೇಶನಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹೀಂ, ಪಿಎಇಟಿ ಕ್ಯಾಂಪಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶರ್ಫುದ್ದೀನ್ ಪಿ.ಕೆ., ನಗರದ ವಿವಿಧ ಅಧಿಕಾರಿಗಳು ಮತ್ತು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್, ಪಿ.ಎ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಪ್ರಾಂಶುಪಾಲೆ ಡಾ.ಅಫೀಫ ಸಲೀಮ್, ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸರ್ಫರಾಝ್ ಜೆ. ಹಾಶಿಂ, ಪಿಎಇಟಿ ಕ್ಯಾಂಪಸ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶರ್ಫುದ್ದೀನ್ ಪಿ.ಕೆ. ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!