ಮಂಗಳೂರು: ತಲ್ವಾರ್ ಹಿಡಿದು ಡಾನ್ಸ್ ಮಾಡಿ ರೀಲ್ಸ್ ಮಾಡಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳ ಬಂಧನವಾಗಿದೆ.ಬಂಧಿತರನ್ನು ಬಂದರು ನಿವಾಸಿ ಅಮೀರ್ ಸುಹೇಲ್ (28) ಹಾಗೂ ಉರುಂದಾಡಿಗುಡ್ಡೆ ಕಾವೂರು ನಿವಾಸಿ ಸುರೇಶ (29) ಎಂದು ತಿಳಿದುಬಂದಿದೆ.
ಆರೋಪಿಗಳು ದಿ.13 ರಂದು ಸಾಮಾಜಿಕ ಜಾಲತಾಣವಾದ ಪೇಸಬುಕ್ ಖಾತೆಯಲ್ಲಿ ಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಮೇಲೆ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಸ್ಟೋರಿಗೆ ಹಾಕಿದ್ದು ಈ ವಿಡಿಯೋ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ಅಮೀರ್ ಸುಹೇಲ್ ಹಾಗೂ ಸುರೇಶ ಎಂಬುವವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಯಾಕೆ ಯಂತೆ ಪ್ರಕರಣ ದಾಖಲಾಗಿದೆ.
ಈ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.