ಮಂಗಳೂರು: ಅಡ್ಯಾರು ಗ್ರಾಮ ಪಂಚಾಯತ್ ಪ್ರಕೃತಿ ಸಂಜೀವಿನಿ ಒಕ್ಕೂಟ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಇವರ ಸಂಯುಕ್ತ ಆಶ್ರಯದಲ್ಲಿ ಅಡ್ಯಾರು ಗ್ರಾಮೋತ್ಸವ ಕಾರ್ಯಕ್ರಮವು ಡಿ 20 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ತಿಳಿಸಿದರು .
ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಕಾರ್ಯಕ್ರಮ ನಡೆಯಲಿದೆ . ಪೂರ್ವಾಹ್ನ 9 ರಿಂದ ಮಕ್ಕಳ ಪಥ ಸಂಚನದ ಬಳಿಕ ಉದ್ಘಾಟನಾ ಕಾರ್ಯಕ್ರಮವು ನಡೆಯಲಿಕ್ಕಿದೆ . ಕಾರ್ಯಕ್ರಮದ ಉದ್ಘಾಟನೆಯನ್ನು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ನೆರವೇರಿಸುವವರು . ಅಧ್ಯಕ್ಷತೆಯನ್ನು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ವಹಿಸಲಿರುವವರು . ಹಾಗೇ ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ , ಅಡ್ಯಾರು ಗ್ರಾಮ ಪಂಚಾಯತ್ ಇದರ ಉಪಾಧ್ಯಕ್ಷರಾದ ಝೋಹರಾ ಭಾಗವಹಿಸಲಿದ್ದಾರೆ . ಸಂಜೆ 4. 30 ರಿಂದ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ . ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ ಬ್ರಿಜೇಶ್ ಚೌಟ , ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ , ಎಸ್ ಎಲ್ ಭೋಜೇಗೌಡ , ಪ್ರತಾಪ್ ಸಿಂಹ ನಾಯಕ್ ,ಧನಂಜಯ್ ಸರ್ಜಿ , ಕಿಶೋರ್ ಬಿ ಆರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಹೆಚ್ ವಿ ಸಹಿತ ಮುಂತಾದ ಅನೇಕ ಮಂದಿ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು .
ಪತ್ರಿಕಾಗೋಷ್ಠಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಆಸಿಫ್ , ಅಶ್ರಫ್ ಅಡ್ಯಾರ್ ಮತ್ತು ಅಬ್ದುಲ್ ರಜಾಕ್ ಉಪಸ್ಥಿತರಿದ್ದರು .
Win88apps, downloading now, hoping to win! Wish me luck, guys! Try those apps: win88apps