ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ಧಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ . ಇದನ್ನು ಬಿಜೆಪಿ ಸಹಿಸಲ್ಲ : ಸಂಸದ ಕ್ಯಾ ಬ್ರಿಜೇಶ್‌ಚೌಟ

ಮಂಗಳೂರು: ಪೊಲೀಸ್ ಅಧಿಕಾರಿಗಳು ಕೋಳಿ ಅಂಕದಲ್ಲಿ ಅಕ್ರಮ ಚಟುವಟಿಗಳು ಆಗುತ್ತಿದೆ ಎಂದು ನೆಪವನ್ನು ಒಡ್ಡಿ ನಮ್ಮ ಧಾರ್ಮಿಕ ನಂಬಿಕೆಯನ್ನು ಹಾಳುಮಾಡುವ ಪ್ರಯತ್ನ ಮಾಡ್ತಾ ಇದ್ದಾರೆ. ರಾಜಕೀಯ ಬೆಂಬಲ ಇಲ್ಲದೆ ಈ ರೀತಿಯ ಬೆಳವಣಿಗೆ ಸಾಧ್ಯವಿಲ್ಲ. ನಮ್ಮ ನಂಬಿಕೆಯ ಆಚರಣೆಯಾದ ಕೋಳಿ ಅಂಕ, ಕಂಬಳ, ಯಕ್ಷಗಾನ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಸಂಸದ ಕ್ಯಾ ಬ್ರಿಜೇಶ್‌ಚೌಟ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು, ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದರೆ ಸಹಿಸಲಾಗದು ಎಂದರು.

ಕೇಪು ಉಳ್ಳಾಲ್ಲಿ ಕ್ಷೇತ್ರದಲ್ಲಿ 800 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೋಳಿ ಅಂಕದಲ್ಲಿ ಜೂಜು, ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದಲ್ಲಿ ಪೊಲೀಸರ ಮೂಲಕ ತಡೆಯಲು ಪ್ರಯತ್ನಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರ ತುಘಲಕ್ ಶಾಹಿ ಆಡಳಿತ ನಡೆಸುತ್ತಿದೆ .
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಗಳನ್ನು ಅಳವಡಿಸಿಕೊಂಡು ಬರಲಾಗುತ್ತಿದೆ ಎಂದರು.

ಧಾರ್ಮಿಕ ನಂಬಿಕೆಗಳಿಗೆ ತೊಂದರೆಯಾಗುವ ಯಾವುದೇ ಕೃತ್ಯ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿ ಹೇಳಿಕೆ ನೀಡಿದ ಹೊರತಾಗಿಯೂ ಇಂತಹ ಕೃತ್ಯಗಳು ನಡೆಯುತ್ತಿವೆ. ಇನ್ನಾದರೂ ಇಂತಹ ದಮನ ಪ್ರಕ್ರಿಯೆಗಳ ಬಗ್ಗೆ ಉಸ್ತುವಾರಿ ಸಚಿವರು ಗಂಭೀರವಾಗಿ ಪರಿಗಣಿಸಬೇಕು. ಇನ್ನು ಅಲ್ಲಲ್ಲಿ ಜಾತ್ರಾಮಹೋತ್ಸವ, ಕೋಲ, ನೇಮ ನಡೆಯಲಿದ್ದು ಇಂತಹ ಕುಂಟು ನೆಪವೊಡ್ಡಿ ಹಿಂದೂ ನಂಬಿಕೆಗೆ ಘಾಸಿಗೊಳಿಸಿದರೆ, ಸುಮ್ಮನಿರುವುದಿಲ್ಲ. ಕೇಪು ಉಳ್ಳಾಲ್ಲಿ ಕೋಳಿ ಅಂಕ ಪ್ರಕರಣದ ಕುರಿತಂತೆಯೂ ಕಾನೂನಿನ ಮೂಲಕ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು

ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಕೇಪು ಕ್ಷೇತ್ರದಲಲ್ಲಿ ಜೂಜಿನ ವ್ಯವಸ್ಥೆ ಇಲ್ಲ ಇಷ್ಟು ವರ್ಷಗಳಿಂದ ಅಲ್ಲಿ ನಡೆಯುತ್ತಿದ್ದ ಕೋಳಿ ಅಂಕವನ್ನು ಈವರ್ಷ ಹಠಾತ್ತಾಗಿ ತಡೆಯಲು ಪ್ರಯತ್ನಿಸಿರುವುದಲ್ಲದೆ, ಪಕ್ಷದ ಜಿಲ್ಲಾಧ್ಯಕ್ಷರ ಮೇಲೂ ಪ್ರಾಣಿ ಹಿಂಸೆ ಪ್ರಕರಣ ದಾಖಲಾಗಿದೆ. ಹಬ್ಬ ಹರಿದಿನಗಳಿಗೆ ಸಂಬಂಧಿಸಿ ಅಲ್ಲಲ್ಲಿ ಕುರಿ ಕೋಳಿ ಬಲಿ ನೀಡುವ ಪದ್ಧತಿ ಇದ್ದು ಅದನ್ನು ನಿಲ್ಲಿಸುವ ತಾಕತ್ತು ಸರಕಾರ ಅಥವಾ ಪೊಲೀಸ್ ಅಧಿಕಾರಿಗಳಿಗೆ ಇದೆಯೇ ಎಂದು ಪ್ರಶ್ನಿಸಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ನಾವೂ ಈ ಹಿಂದೆ ಮೂರು ವರ್ಷ ಸರಕಾರ ನಡೆಸಿದ್ದೇವೆ. ನಮ್ಮ ಅವಧಿಯಲ್ಲಿ ಒಂದೇ ಒಂದು ಇಂತಹ ಘಟನೆ ನಡೆದಿಲ್ಲ. ಕಾಂಗ್ರೆಸ್ ಸರಕಾರಕ್ಕೆ ಅಧಿಕಾರಿಗಳನ್ನು ಸೇರಿಸಿ ಇಂತಹ ತಪ್ಪುಗಳನ್ನು ಸರಿಪಡಿಸಲು ಆಗುವುದಿಲ್ಲ ಎಂದಾದರೆ ಇದು ಕೇವಲ ನಮ್ಮ ಧಾರ್ಮಿಕ ಭಾನನೆಗಳಿಗೆ ಹೊಡೆತ ನೀಡುವ ವಿಚಾರ. ಕೋಳಿ ಅಂಕಕ್ಕೆ ಸಾವಿರಾರು ಜನ ಹೋಗುತ್ತಾರೆ. ಅವೆರಲ್ಲರ ಮೇಲೆ ಪ್ರಕರಣ ದಾಖಲಿಸಲು ಪೆನ್ನು ಪುಸ್ತಕ ಇದೆಯೇ ಎಂದು ಪ್ರಶ್ನಿಸಿದರು.ಮಂಗಳೂರಿನಲ್ಲಿ 50ಕ್ಕೂ ಅಧಿಕ ಪ್ರಾಣಿ ವಧಾ ಕೇಂದ್ರಗಳಿವೆ. ಅಲ್ಲಿ ಯಾವ ಎಫ್‌ಐಆರ್ ಯಾಕೆ ದಾಖಲಿಸುವುದಿಲ್ಲ ಎಂದವರು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಅರುಣ್ ಶೇಟ್, ಜಗದೀಶ್ ಆಳ್ವ, ವಸಂತ ಪೂಜಾರಿ ಉಪಸ್ತಿತರಿದ್ದರು.

SHARE
Loading spinner

One thought on “ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ಧಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ . ಇದನ್ನು ಬಿಜೆಪಿ ಸಹಿಸಲ್ಲ : ಸಂಸದ ಕ್ಯಾ ಬ್ರಿಜೇಶ್‌ಚೌಟ

  1. Fabetvina, folks! This one’s a new one for me. It seems focused on Vietnamese players… So if you’re in that area, it might be worth digging a little deeper to see what they’re offering. Check it out first: fabetvina

    Loading spinner

Leave a Reply

Your email address will not be published. Required fields are marked *

error: Content is protected !!