ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಶಂಕಿತ ಬಾಂಗ್ಲಾದೇಶಿ ಪ್ರಜೆಗೆ ಅಕ್ರಮವಾಗಿ ಪಾಸ್ಪೋರ್ಟ್ ಪಡೆಯಲು ಸಹಾಯ ಮಾಡಿದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಸುದ್ದಿ ಅತ್ಯಂತ ಆತಂಕಕಾರಿ ಹಾಗೂ ಖಂಡನೀಯವಾಗಿದೆ.ಪೊಲೀಸ್ ಇಲಾಖೆ ಎಂಬುದು ಕಾನೂನು ಜಾರಿ ಮಾಡುವ ಸಂಸ್ಥೆಯಾಗಿದ್ದು, ರಾಷ್ಟ್ರ ಭದ್ರತೆ ಮತ್ತು ನಾಗರಿಕರ ಸುರಕ್ಷತೆಯನ್ನು ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದೆ. ಇಂತಹ ಇಲಾಖೆಯೊಳಗಿಂದಲೇ ದೇಶದ ಕಾನೂನು ಹಾಗೂ ಭದ್ರತಾ ವ್ಯವಸ್ಥೆಗೆ ಧಕ್ಕೆ ತರುವ ಕೃತ್ಯ ನಡೆದಿದೆ ಎಂಬುದು ಕರ್ನಾಟಕ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ.
ಅಕ್ರಮ ವಲಸೆ, ನಕಲಿ ದಾಖಲೆಗಳು ಹಾಗೂ ಪಾಸ್ಪೋರ್ಟ್ ದುರ್ಬಳಕೆ ದೇಶದ ಆಂತರಿಕ ಭದ್ರತೆಗೆ ಗಂಭೀರ ಸವಾಲುಗಳಾಗಿವೆ. ಈ ರೀತಿಯ ಪ್ರಕರಣಗಳಲ್ಲಿ ಸರಕಾರ ಕೇವಲ ಒಬ್ಬ ಸಿಬ್ಬಂದಿಯ ಬಂಧನಕ್ಕೆ ಸೀಮಿತವಾಗದೆ, ಈ ಅಕ್ರಮದ ಹಿಂದೆ ಇರುವ ಸಂಪೂರ್ಣ ಜಾಲವನ್ನು ಸರಿಯಾದ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು.ಯಾವ್ಯಾವ ಅಧಿಕಾರಿಗಳು, ಮಧ್ಯವರ್ತಿಗಳು ಅಥವಾ ರಾಜಕೀಯ ಆಶ್ರಯ ಇದಕ್ಕೆ ಕಾರಣವಾಗಿದೆಯೋ ಎಂಬುದರ ಬಗ್ಗೆ ನಿಷ್ಪಕ್ಷಪಾತ ಹಾಗೂ ಉನ್ನತ ಮಟ್ಟದ ತನಿಖೆ ನಡೆಯಬೇಕು.ಈ ಪ್ರಕರಣದಲ್ಲಿ ಕಾನೂನು ವ್ಯವಸ್ಥೆಯನ್ನೇ ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವುದು ಕ್ಷಮಾರ್ಹವಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
ಭಾರತೀಯ ಜನತಾ ಪಾರ್ಟಿ ಸದಾ ರಾಷ್ಟ್ರ ಭದ್ರತೆ, ಕಾನೂನಿನ ಆಳ್ವಿಕೆ ಮತ್ತು ಪಾರದರ್ಶಕ ಆಡಳಿತಕ್ಕೆ ಬದ್ಧವಾಗಿದೆ.ರಾಷ್ಟ್ರದ ಭದ್ರತೆ ರಾಜಕೀಯಕ್ಕಿಂತ ಮೇಲು.ಈ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಜಿಲ್ಲಾ ಪೋಲಿಸ್ ವರಿಷ್ಠ ರು ಮತ್ತು ಸರಕಾರ ತಕ್ಷಣ ಸ್ಪಷ್ಟನೆ ನೀಡಬೇಕು ಹಾಗೂ ಪೊಲೀಸ್ ಇಲಾಖೆಯನ್ನು ರಾಜಕೀಯ ಒತ್ತಡ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ.
abc8slot’s got some cool slots I haven’t seen anywhere else. Worth checking out if you’re looking for something different. Spin the reels at abc8slot