ನಶೆ ಮುಕ್ತ ಮಂಗಳೂರು ಅಭಿಯಾನಕ್ಕೆ ಡಿ .27 ರಂದು ಚಾಲನೆ.

ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಪ್ರಯುಕ್ತ “ನಶೆ ಮುಕ್ತ ಮಂಗಳೂರು” ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬೃಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು , ಹೀಗಾಗಿ ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ನಗರದ ಟಿ.ಎಂ.ಎ.ಪೈ ಇಂಟರ್‌ನ್ಯಾಷನಲ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್ ಇದರ ಸ್ಥಾಪಕರು ಮತ್ತು ಸಂಸ್ಥೆಯ ಅಧ್ಯಕ್ಷರಾದ ಸುಹೈಲ್ ಕಂದಕ್ ತಿಳಿಸಿದರು.

ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ನಗರದಲ್ಲಿ ಡ್ರಗ್ಸ್ ನ ಹಾವಳಿಯನ್ನು ಕಡಿಮೆ ಮಾಡಲು ಮತ್ತು ಯುವಕರಿಗೆ ಮಾದಕ ವ್ಯಸನಗಳ ಬಗ್ಗೆ ಅರಿವನ್ನು ಮೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಸ್ವೀಕರ್ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರು ಸಹಿತ ಹಲವು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಂಗಳೂರು ಬಿಷಪ್, ರಾಮಕೃಷ್ಣ ಮಠದ ಸ್ವಾಮೀಜಿಗಳು ಮತ್ತು ಮಂಗಳೂರು ಮುಸ್ಲಿಂ ಧಾರ್ಮಿಕ ಮುಖಂಡರು ಅಭಿಯಾನದೊಂದಿಗೆ ಸೇರಿಕೊಳ್ಳಲಿದ್ದಾರೆ ಹಾಗೂ ನಮ್ಮ ತುಳುನಾಡಿನ ಪ್ರಸಿದ್ಧ ನಟರು ನಮ್ಮೊಂದಿಗೆ ಕೈ ಜೋಡಿಸಲಿದ್ದಾರೆ ಎಂದರು .

ಈ ಕಾರ್ಯಕ್ರಮವು ವಿಶೇಷವಾಗಿ ಯುವಕರಿಗೆ ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸುತ್ತಿದ್ದು ಇದರ ಅಂಗವಾಗಿ ಜಿಲ್ಲಾ ಮಟ್ಟ ವ್ಯಾಪ್ತಿಯಲ್ಲಿ ನಶಾಮುಕ್ತಿ ಜಾಗೃತಿ, ಡ್ರಗ್ ಮುಕ್ತ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ತಿಳಿಸಿದರು.

ಈ ವರೆಗೆ 6 ಕಾಲೇಜು ಕ್ಯಾಂಪಸ್ ಜಾಗೃತೆ ಕಾರ್ಯಾಗಾರ, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಪೋಸ್ಟ‌ರ್ ಅಭಿಯಾನ, ಸಂಘ ಮತ್ತು ಸಂಸ್ಥೆಗಳಲ್ಲಿ ಮಾದಕದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಕಾರ್ಯಕ್ರಮವು ಯುವಕರಲ್ಲಿ ಮಾದಕದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸೃಜನಾತ್ಮಕ ಸಮಾಜವನ್ನು ಕಟ್ಟುವ ಉದ್ದೇಶವನ್ನು ಹೊಂದಿದ್ದು ಉತ್ತಮ ಸಮಾಜದ ನಿರ್ಮಾಣಕ್ಕೆ ಕಾರಣವಾಗುವುದೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೈಕೋಲಜಿಸ್ಟ್ ಡಾ. ರುಕ್ಸಾನ ಮಂಗಳೂರು , ಬಾರ್ನ್ ಅಗೇನ್ ರಿಕವರಿ ಸೆಂಟರ್ ಇದರ ಸಹ ಸ್ಥಾಪಕರಾದ ಗುರು ಪ್ರಸಾದ್, ಮೇಕ್ ಎ ಚೇಂಜ್ ಫೌಂಡೇಶನ್ ನ ಸಹ ಸ್ಥಾಪಕರಾದ ಬಷೀರ್ ಡಿಎಕ್ಸ್, ಬೀಮ್ ಆರ್ಮಿ ಕರ್ನಾಟಕ ಏಕ್ತಾ ಮಿಷನ್ ಇದರ ರಾಜ್ಯ ಸಂಯೋಜಕರಾದ ದಿನೇಶ್ ಮುಳೂರು ಉಪಸ್ಥಿತರಿದ್ದರು.

SHARE
Loading spinner

One thought on “ನಶೆ ಮುಕ್ತ ಮಂಗಳೂರು ಅಭಿಯಾನಕ್ಕೆ ಡಿ .27 ರಂದು ಚಾಲನೆ.

  1. Gamebet6 is aight, got some cool games I haven’t seen anywhere else. Not the flashiest site, but it gets the job done. Worth a peek, for sure! Here’s the link: gamebet6

    Loading spinner

Leave a Reply

Your email address will not be published. Required fields are marked *

error: Content is protected !!