ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಸುಶಾಸನ ದಿನ ಆಚರಣೆ:

ಮಂಗಳೂರು : ದೇಶದ ಮಾಜಿ ಪ್ರಧಾನಿ, ಭಾರತ ರತ್ನ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಯವರ 101 ನೇ ಜನ್ಮದಿನದ ಪ್ರಯುಕ್ತ ನಗರದ ಕೊಡಿಯಾಲ್ ಬೈಲ್ ನ ಅಟಲ್ ಸೇವಾ ಕೇಂದ್ರದಲ್ಲಿ “ಸುಶಾಸನ ದಿನ” (ಉತ್ತಮ ಆಡಳಿತ ದಿನ) ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು ರಾಷ್ಟ್ರ ಮೊದಲು, ಅಧಿಕಾರ ನಂತರ ಎನ್ನುವ ಸಿದ್ಧಾಂತವನ್ನು ಅಟಲ್ ಜೀ ಪದೇ ಪದೇ ಉಚ್ಚರಿಸಿ ಕೋಟಿ ಕೋಟಿ ಕಾರ್ಯಕರ್ತರ ಪ್ರೇರಣೆಯಾಗಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ರೈತರು, ಬಡವರು, ಮಹಿಳೆಯರು, ಹಾಗೂ ಹಿಂದುಳಿದ ವರ್ಗದವರ ಪರವಾಗಿ ಕೈಗೊಂಡ ಅನೇಕ ಅಭಿವೃದ್ಧಿ ಯೋಜನೆಗಳು ಹಾಗೂ ಸಾಧನೆಗಳು ಅಟಲ್ ಜೀ ಅವರ ಕನಸುಗಳು ಸಾಕಾರಗೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ರವಿಶಂಕರ್ ಮಿಜಾರು ಮಾತನಾಡಿ ದೂರದೃಷ್ಟಿ ಆಡಳಿತದ ಮೂಲಕ ಇಡೀ ದೇಶದ ಜನಮನ ಗೆದ್ದ ನಾಯಕ ಅಟಲ್ ಜೀ ಯವರ ಕೊಡುಗೆ ಅನನ್ಯ ಎಂದು ಸ್ಮರಿಸಿದರು. ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ನಿಕಟ ಪೂರ್ವ ಮ.ನ.ಪಾ ಸದಸ್ಯರುಗಳು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!