ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ, ರಥೋತ್ಸವ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುವಾರ ಕ್ಯಾಲೆಂಡರ್ ಹೊಸ ವರ್ಷದ ಪ್ರಯುಕ್ತ ವಿಶೇಷ ಗುರುಪೂಜೆ, ಗಣಪತಿ ಹೋಮ ಹಾಗು ರಥೋತ್ಸವ ನೆರವೇರಿತು.

ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ,
ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು, ಜಯರಾಮ‌ ಕಾರಂದೂರು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ಅಶೋಕ್ ಕುಮಾರ್, ಶ್ರೀ ಗೋಕರ್ಣನಾಥ ಸೇವಾದಳ ಸದಸ್ಯರು ಇದ್ದರು. ಸಾವಿರಾರು ಭಕ್ತರು ಬೆಳ್ಳಿ ರಥ ಎಳೆದು ಪುನೀತರಾದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!