ಜ. 4ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ‘ಕುಂಭಕಲಾವಳಿ-ಕುಲಾಲ ಕಲಾ ಸೇವಾಂಜಲಿ’ ಕಾರ್ಯಕ್ರಮ .. !

ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ ‘ಕುಂಭಕಲಾವಳಿ-ಕುಲಾಲ ಕಲಾ ಸೇವಾಂಜಲಿ’ ಅದ್ಧೂರಿ ಕಾರ್ಯಕ್ರಮವು ಜ. 4ರಂದು ಮಂಗಳೂರು ಕುದ್ಮಲ್ ರಂಗರಾವ್ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷರಾದ ಲ| ಅನಿಲ್‌ ದಾಸ್ ತಿಳಿಸಿದರು .

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ, ಸಭಾಕಾರ್ಯಕ್ರಮ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಆಶಕ್ತರಿಗೆ ನೆರವು ಮುಂತಾದ ಸಾಮಾಜಿಕ ಸೇವಾ ಚಟುವಟಿಕೆಗಳು ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು .

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯ ಹತ್ತು ಮಂದಿ ಸಾಧಕರಿಗೆ ಕುಲಾಲ ಸಿಂಧೂರ ಪ್ರಶಸ್ತಿ ಪ್ರದಾನ ನಡೆಯಲಿದೆ. ದಾಸ್ ಚಾರಿಟೇಬಲ್‌ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ ಸೇವಾಂಜಲಿ ಹೆಸರಲ್ಲಿ ಫಲಾನುಭವಿಗಳಿಗೆ ಸಹಾಯಹಸ್ತ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಪ್ರೋತ್ಸಾಹ ಧನ, ವೈದ್ಯಕೀಯ ನೆರವು, ಆಶಕ್ತರಿಗೆ ಆರ್ಥಿಕ ಸಹಾಯ ನೀಡಲಾಗುವುದೆಂದು ತಿಳಿಸಿದರು .

ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ/ ಯುವವೇದಿಕೆಗಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು .ಇದರಲ್ಲಿ ಪ್ರಥಮ ಬಹುಮಾನ ರೂ. 51,0001, ದ್ವಿತೀಯ ರೂ. 31,001 ಹಾಗೂ ತೃತೀಯ ರೂ. 21,001 ನೀಡಲಾಗುತ್ತದೆ. ಭಾಗವಹಿಸುವ ಎಲ್ಲಾ ತಂಡಗಳಿಗೆ ನಗದು ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದೆಂದು ತಿಳಿಸಿದರು .

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಸ್ಥಾಪಕಾಧ್ಯಕ್ಷರಾದ ಡಾ| ಅಣ್ಣಯ್ಯ ಕುಲಾಲ್ , ಸುಕುಮಾರ್ ಬಂಟ್ವಾಳ, ನವೀನ್ ಕುಮಾರ್ ಮಜಲ್ , ರಾಧಾಕೃಷ್ಣ ಬಂಟ್ವಾಳ ಮುಂತಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!