ಮಂಗಳೂರು:ದ.ಕ. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ ಜ.3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿದೆ. ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಕಾರ್ಯಕ್ರಮಗಳು ನಡೆಯುವ ಸಮಯ ಕುದುರೆಮುಖ ಜಂಕ್ಷನ್‌ನಿಂದ ತಣ್ಣೀರುಬಾವಿ ಬೀಚ್‌ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವಂತಿಲ್ಲ. ಸಾರ್ವಜನಿಕರು ತನ್ನ ವಾಹನಗಳನ್ನು ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲ್ಲಿಸಬೇಕು. ಕಾರ್ಯಕ್ರಮದ ಮಾರ್ಗದಲ್ಲಿ ವಾಹನ ನಿಲುಗಡೆಯ ಸೂಚನಾ ಫಲಕದ ಪ್ಲೆಕ್ಸ್‌ಗಳನ್ನು ಅಳವಡಿಸಿದ್ದು, ಮಾರ್ಗಸೂಚಿಯನ್ನು ಅನುಸರಿಸುವುದು ಹಾಗೂ ಕಾರ್ಯಕ್ರಮ ಪ್ರಾರಂಭವಾಗುವ ಮುಂಚಿತವಾಗಿ ಬಂದು ನಿರ್ಧಿಷ್ಟ ಸ್ಥಳದಲ್ಲಿ ನಿಲ್ಲಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.