ಕೋಳಿ ಅಂಕ ವಿವಾದದ ಬಗ್ಗೆ ಸ್ಪೀಕರ್ ಯು ಟಿ ಖಾದರ್

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕೋಳಿ ಅಂಕ ನಿಷೇಧ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ಖಾದರ್ ಅವರು, ‘ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂಬುದು ಪೊಲೀಸ್ ಇಲಾಖೆಯ ಆರೋಪ. ಜೂಜು ನಡೆದರೆ, ಅದರಲ್ಲಿ ತೊಡಗಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.

ಸಾಂಪ್ರದಾಯಿಕ ಕೋಳಿ ಅಂಕವನ್ನೇ ತಡೆಯುವುದು ಸರಿಯಲ್ಲ ಎಂಬುದು ಆಯೋಜಕರ ವಾದ. ಈ ಸಮಸ್ಯೆಯನ್ನು ಸೂಕ್ತ ನಿಯಮಗಳನ್ನು ರೂಪಿಸುವ ಮೂಲಕವೇ ಬಗೆಹರಿಸಬೇಕಿದೆ. ಈ ಬಗ್ಗೆ ಕಾನೂನು ಸಚಿವರು ಮತ್ತು ಸರ್ಕಾರದ ಕಾನೂನು ಸಲಹೆಗಾರರ ಜೊತೆ ಮಾತನಾಡಿ, ಸಲಹೆಗಳನ್ನು ಕೊಟ್ಡಿದ್ದೇನೆ. ಈ ಸಮಸ್ಯೆ ಬಗೆಹರಿಯಬಹುದು ಎಂಬ ವಿಶ್ವಾಸ ಇದೆ’ ಎಂದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!