ವಿದ್ಯುತ್ ಶಾಕ್ ತಗುಲಿ ಎಂಟನೇ ತರಗತಿ ವಿದ್ಯಾರ್ಥಿ ಸಾವು

​ ಕಾಸರಗೋಡು/ ತ್ರಿಶೂರು: ಮನೆಯಂಗಳದಲ್ಲಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತನನ್ನು ತ್ರಿಶೂರು ಜಿಲ್ಲೆಯ ಕೊಂಗಂಪಾರ ನಿವಾಸಿ ರಮೇಶ್ ಅವರ ಪುತ್ರ ಬದ್ರೀನಾಥ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರು ಗುರುದೇವ ಶಾಲೆಯ ವಿದ್ಯಾರ್ಥಿಯಾಗಿದ್ದನು.

​ಮನೆಯಂಗಳದಲ್ಲಿ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡುತ್ತಿದ್ದಾಗ, ಮೈನ್ ಸ್ವಿಚ್‌ ಹತ್ತಿರವಿದ್ದ ಅರ್ಥಿಂಗ್ ತಂತಿಗೆ ಸ್ಪರ್ಶಿಸಿ ಬಾಲಕನಿಗೆ ವಿದ್ಯುತ್ ಶಾಕ್ ತಗುಲಿದೆ.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬದ್ರೀನಾಥ್‌ನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. ವಿದ್ಯಾರ್ಥಿಯ ಅಕಾಲಿಕ ನಿಧನದಿಂದಾಗಿ ಸ್ಥಳೀಯರು ಮತ್ತು ಶಾಲಾ ವರ್ಗದಲ್ಲಿ ತೀವ್ರ ದುಃಖ ಮನೆಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!