ರಾಜ್ಯದಲ್ಲಿ ಭಾರೀ ಮಳೆಯ ಸಾಧ್ಯತೆ ಮುಂದುವರಿಯಲಿದೆ ಎಂದು ಭಾರತದ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ಆಲಪ್ಪುಜ್ಹ ದಿಂದ ಕಾಸರಗೋಡುವರೆಗೆ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.
ವಯನಾಡು ಮತ್ತು ಕೊಜ್ಹಿಕ್ಕೋಡ್ ಜಿಲ್ಲೆಗಳಲ್ಲಿನ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಇಂದು ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ , ಮಲಪ್ಪುರಂ , ವಯನಾಡು, ತ್ರಿಶೂರ್, ಪಾಲಕ್ಕಾಡ್ , ಇಡುಕ್ಕಿ,ಅಲಪ್ಪುಜ್ಹ , ಎರ್ನಾಕುಲಂ ಮತ್ತು ಕೋಟಾಯಂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಇಂದು ಬೆಳಗ್ಗಿನಿಂದಲೇ ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಕೆಲವೆಡೆ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಗಂಟೆಗೆ 50 ಕಿಲೋಮೀಟರ್ ವೇಗ ತಲುಪುವ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.


