ಪತ್ತನಂತಿಟ್ಟ: ಮನೆಯ ಲಿಫ್ಟ್‌ನಲ್ಲಿ ತಲೆ ಸಿಲುಕಿ 75 ವರ್ಷದ ವೃದ್ಧರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಕಡಮ್ಮನಿಟ್ಟ ನಿವಾಸಿ ಕಲ್ಲೇಲಿಮುಕ್ಕಿಲ್ ಮಾಥುಕುಟ್ಟಿ (75) ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ 12 ಗಂಟೆಯ ನಂತರ ಈ ದುರ್ಘಟನೆ ಸಂಭವಿಸಿದೆ. ಲಿಫ್ಟ್ ಬಳಕೆ ಮಾಡುವ ವೇಳೆ ಅವರ ತಲೆ ಲಿಫ್ಟ್‌ನ ಮಧ್ಯೆ ಸಿಲುಕಿಕೊಂಡಿದೆ ಎಂದು ತಿಳಿದುಬಂದಿದೆ. ಮಾಥುಕುಟ್ಟಿ ಅವರು ದೈಹಿಕ ಅಸಮರ್ಥತೆಯಿಂದ ಬಳಲುತ್ತಿದ್ದರು.
ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದರು. ಮಾಹಿತಿ ತಿಳಿದು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ, ಅಷ್ಟರಲ್ಲೇ ಮಾಥುಕುತ್ತಿ ಮೃತಪಟ್ಟಿದ್ದರು.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.


