ತ್ರಿಶೂರ್ ಜಿಲ್ಲೆಯ ಪೆರುಂಬಿಲಾವಿನಲ್ಲಿ ತಂದೆಯೊಬ್ಬ ಮಕ್ಕಳಿಗೆ ವಿಷ ನೀಡಿ ಕೊಲ್ಲಲು ಯತ್ನಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ತಮಿಳುನಾಡು ಮೂಲದ ಮುತ್ತು ಅವರ ಪುತ್ರಿ ಋತಿಕಾ (7) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇಲಿ ವಿಷ ಬೆರೆಸಿದ ಜ್ಯೂಸ್ ಸೇವಿಸಿದ್ದರಿಂದ ಆಕೆಯ ಸ್ಥಿತಿ ಗಂಭೀರವಾಗಿತ್ತು. ಋತಿಕಾಳ ಕಿರಿಯ ಸಹೋದರ ಋತಿನ್ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ.

ಪೊಲೀಸ್ ವಶದಿಂದ ತಪ್ಪಿಸಿಕೊಂಡಿದ್ದ ಆರೋಪಿ ಮುತ್ತು (29) ಅವರನ್ನು ನಿನ್ನೆ ಮತ್ತೆ ಬಂಧಿಸಲಾಗಿದೆ.
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಉಂಟಾದ ದ್ವೇಷದಿಂದ ಮುತ್ತು ತನ್ನ ಇಬ್ಬರು ಮಕ್ಕಳಿಗೆ ಜ್ಯೂಸ್‌ನಲ್ಲಿ ಇಲಿ ವಿಷ ಬೆರೆಸಿ ಕುಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಮಕ್ಕಳನ್ನು ತ್ರಿಶೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಋತಿಕಾಳನ್ನು ಆಸ್ಟರ್ ಮೆಡಿಸಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಂದು ಮುಂಜಾನೆ ಸುಮಾರು 2 ಗಂಟೆಗೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಇದೇ ವೇಳೆ, ತ್ರಿಶೂರ್ ಮೆಡಿಕಲ್ ಕಾಲೇಜಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಋತಿನ್‌ನ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

