ತಿರುವನಂತಪುರ: ಕೇರಳದಲ್ಲಿ ಆಟಿ ಮಾಸದ ಮಳೆ ತೀವ್ರಗೊಂಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿದ ನೌಕಾಸ್ಟ್ ಮುನ್ಸೂಚನೆಯಲ್ಲಿ ತಿಳಿಸಿದೆ.

ಅಲಪ್ಪುಳ, ಕೋಟಾಯಂ, ಎರ್ನಾಕುಳಂ, ಮಲಪ್ಪುರಂ, ಕೋಝಿಕ್ಕೋಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳ ಅವಧಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಈ ಜಿಲ್ಲೆಗಳ ಕೆಲವೆಡೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50 ಕಿ.ಮೀ. ವೇಗದವರೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಉಳಿದ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.


