ಕಾಸರಗೋಡು ಗುಡುಗು ಮಿಂಚು ಸಹಿತ ಬಿರುಸಿನ ಮಳೆಗೆ ಸಾಧ್ಯತೆ

ಕಾಸರಗೋಡು/ತಿರುವನಂತಪುರ: ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

​ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

​ಮುಂದಿನ 3 ಗಂಟೆಗಳ ಹವಾಮಾನ ಮುನ್ಸೂಚನೆ
​ರಾಜ್ಯದ ಎರ್ನಾಕುಲಂ, ತ್ರೆಶೂರ್, ಪಾಲ್ಘಾಟ್ (ಪಾಲಕ್ಕಾಡ್), ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಧ್ಯಮ ಮಳೆ ಹಾಗೂ ಗಂಟೆಗೆ 40 ಕಿ.ಮೀ ವರೆಗಿನ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.​ಕೇರಳ ಮತ್ತು ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಇಂದು ಮೀನುಗಾರಿಕೆಗೆ ಯಾವುದೇ ತಡೆಯಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!