ಸಿಜೆಪಿಯ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿಗೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಸಿಜೆಪಿ ನಡೆಸಿದ ಪ್ರತಿಭಟನೆ ದೇಶದಾದ್ಯಂತ ತೀವ್ರಗೊಂಡ ಹಿನ್ನೆಲೆ ಧರ್ಮೇಂದ್ರ ಪ್ರಧಾನ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯೂ ಒಂದಾಗಿತ್ತು. ಇದುವರೆಗೆ “ಪ್ರಧಾನ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂಬುದು ಕೇಂದ್ರ ಸರ್ಕಾರದ ನಿಲುವಾಗಿತ್ತು. ಆದರೆ, ಶಿಕ್ಷಣ ಸಚಿವರು ರಾಜೀನಾಮೆ ನೀಡುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ.

ಇಂದು ಸಿಜೆಪಿ ಮತ್ತು ಕೇಂದ್ರ ಸರ್ಕಾರದ ನಡುವೆ ನಾಲ್ಕನೇ ಹಂತದ ಮಾತುಕತೆ ನಡೆಯಲಿರುವ ಸಂದರ್ಭದಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಪ್ರಕಟಗೊಂಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!