ಸೆ. 27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ

ಮಂಗಳೂರು: ಮಂಗಳೂರು-ಕಾಸರಗೋಡು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೇರಳದ ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ ನಡೆಯಲಿದೆ.

ಕೊಚ್ಚಿಯ ಕಲೂರ್‌ನಲ್ಲಿರುವ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಉತ್ಸವದಲ್ಲಿ ಖ್ಯಾತ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ‘ಸಾಧಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕಳೆದ ಮೂರು ದಶಕಗಳಿಂದ ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜಗದೀಶ್ ಚಂದ್ರ ಅಂಚನ್ ಅವರು ಕ್ರೀಡಾ ಬರವಣಿಗೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸೇವೆಗಾಗಿ ಹಲವು ರಾಜ್ಯ, ಅಂತರ್‌ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ’ ರಾಜ್ಯ ಪ್ರಶಸ್ತಿ, 2016ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ, 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ ಹಾಗೂ ‘ನಮ್ಮ ಕುಡ್ಲ ಸಾಧಕ’ ಪ್ರಶಸ್ತಿಯನ್ನು ಅವರು ಪಡೆದಿದ್ದಾರೆ.

2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಕೆ.ಎ. ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ, 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ, 2022ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಘಟಕದ ಕೆ.ಆರ್. ಟ್ಯಾಗೋರ್ ದತ್ತಿ ನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ ಹಾಗೂ ಸಾಧನ ಪ್ರಶಸ್ತಿ, 2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪಡೆದಿದ್ದಾರೆ.

2026ರಲ್ಲಿ ಜಾನಪದ ರತ್ನ ಪ್ರಶಸ್ತಿ, ಕನ್ನಡ ಪಯಸ್ವಿನಿ ಅವಾರ್ಡ್ ಹಾಗೂ ಬಸವಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಅಂಚನ್ ಅವರ ಸಾಧನೆಯನ್ನು ಗುರುತಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!