ಕನ್ನಡ ಮತ್ತು ಜನಪದ ಸಂಸ್ಕೃತಿ ಸೌಹಾರ್ದದ ಸೇತುವೆ: ಟಿ.ಎಂ. ಶಹೀದ್ ತೆಕ್ಕಿಲ್

ಕೊಚ್ಚಿ:ಕನ್ನಡ ಭಾಷೆ ಹಾಗೂ ಜನಪದ ಸಂಸ್ಕೃತಿ ಕರ್ನಾಟಕ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಜನರನ್ನು ಬೆಸೆಯುವ ಸೌಹಾರ್ದದ ಸೇತುವೆಯಾಗಿದೆ ಎಂದು ಕರ್ನಾಟಕ ಸರಕಾರದ ಸಚಿವ ಸ್ಥಾನಮಾನ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಕೊಚ್ಚಿಯಲ್ಲಿ ಹೋಟೆಲ್ ಗೋಕುಲಂ ಪಾರ್ಕ್ ನಲ್ಲಿ ನಡೆದ ಕನ್ನಡ-ಜನಪದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕರ್ನಾಟಕವು ವಿವಿಧ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಗಳ ಸಹಬಾಳ್ವೆಯ ನಾಡಾಗಿದೆ. ಕರಾವಳಿ ಕರ್ನಾಟಕದಲ್ಲಿ ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ, ಸೇರಿದಂತೆ ವೈವಿಧ್ಯಮಯ ಜನಪದ ಕಲೆಗಳು ಇಂದಿಗೂ ಜೀವಂತವಾಗಿರುವ ನೆಲೆಯಾಗಿದೆ. ಇಂತಹ ಕಲೆಗಳು ನಮ್ಮ ನೆಲದ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.

ಜನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಜಾತಿ, ಧರ್ಮ ಹಾಗೂ ಭಾಷೆಯ ಯಾವುದೇ ಗಡಿ ಇಲ್ಲ. ಸಾಂಸ್ಕೃತಿಕ ವಿನಿಮಯದ ಮೂಲಕ ವಿವಿಧ ರಾಜ್ಯಗಳ ನಡುವಿನ ಬಾಂಧವ್ಯ ಮತ್ತು ಸೌಹಾರ್ದವನ್ನು ಮತ್ತಷ್ಟು ಗಟ್ಟಿಗೊಳಿಸಬಹುದು. ಆದ್ದರಿಂದ ಕನ್ನಡ ಹಾಗೂ ಜನಪದ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಾಗಬೇಕು ಎಂದು ಅವರು ಆಶಿಸಿದರು.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರಚಾರ ಹಾಗೂ ಸಂರಕ್ಷಣೆಗೆ ನಡೆಯುತ್ತಿರುವ ಪ್ರಯತ್ನಗಳು ಶ್ಲಾಘನೀಯ. ಕನ್ನಡಿಗರು ಜೊತೆಯಾಗಿ ಜನಪದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವುದು ಸಂತಸದ ಸಂಗತಿ. ಭಾಷೆಯೊಂದಿಗೆ ಜನಪದ ಸಂಸ್ಕೃತಿಯನ್ನೂ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಅವರು ಹೇಳಿದರು.


ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇರಳ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ವಿ.ಇ. ಅಬ್ದುಲ್ ಗಫೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಎರ್ನಾಕುಳಂ ಶಾಸಕ ಟಿ.ಜೆ. ವಿನೋದ್ ,ವಿಶ್ರಾಂತ ಕುಲಪತಿ ಬೋರಲಿಂಗಯ್ಯ ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎ.ಆರ್. ಸುಬ್ಬಯ್ಯಕಟ್ಟೆ ಹಾಗೂ ಶಿವರೆಡ್ಡಿ ಖ್ಯಾಡೇದ್, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ಕೊಚ್ಚಿ ಚಂಗಂಪುಝ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಟಿ.ಜಿ. ರವಿಕುಮಾರ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರನಾರಾಯಣ ಭಟ್ , ಸಾಮಾಜಿಕ ಕಾರ್ಯಕರ್ತರಾದ ಸರಿನ್ ಮೊಹಮ್ಮದ್ ಹಾಗೂ ಸಿದ್ದಿಕ್ ಪಚ್ಚಂಬಳ**, ಕಜಾಪ ಕೇರಳ ಘಟಕದ ಅಧ್ಯಕ್ಷ *ಡಾ. ಮಲ್ಲಿಕಾರ್ಜುನ ಎಸ್. ನಾಸಿ , ಪ್ರಧಾನ ಕಾರ್ಯದರ್ಶಿ ರವಿ ನಾಯ್ಕಾಪು , ಖಜಾಂಚಿ ಪೃಥ್ವಿರಾಜ್ ಶೆಟ್ಟಿ ಕುಂಬಳೆ, ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ವಕೀಲ ಎಂ.ಎಸ್. ಥೋಮಸ್ ಡಿಸೋಜ, ಪತ್ರಕರ್ತ ಪುರುಷೋತ್ತಮ ಪೆರ್ಲ ಪ್ರಮುಖರಾದ ಝೆಡ್ ಏ ಕೈಯಾರ್ ಸೇರಿದಂತೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಲಕ್ಷ್ಮೀ ಮಹೇಶ್ ರಾಜು ಅವರ ‘ಇಲ್ಲಿ-ಇಂತು-ಹೀಗೆ’ ಕವನ ಸಂಕಲನದ ಲೋಕಾರ್ಪಣೆಗೊಂಡಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!