ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಸಚಿವ ಬೈರತಿ ಸುರೇಶ್‌ಗೆ ಸ್ವಾಗತ

ತಿರುವನಂತಪುರಂ: ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲಿ ಕರ್ನಾಟಕದ ಸಾರಿಗೆ ಸಚಿವ ಬೈರತಿ ಸುರೇಶ್ ಅವರನ್ನು ಸ್ವಾಗತಿಸಿದ ಮಂಜೇಶ್ವರ ಶಾಸಕನ ನಡೆ ಗಮನ ಸೆಳೆದಿದೆ.

ಮೈಸೂರು ದಸರಾ ಮಹೋತ್ಸವಕ್ಕೆ ಕೇರಳದ ಮುಖ್ಯಮಂತ್ರಿಗಳನ್ನು ಆಹ್ವಾನಿಸುವ ಉದ್ದೇಶದಿಂದ ಕರ್ನಾಟಕದ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ತಿರುವನಂತಪುರಕ್ಕೆ ಆಗಮಿಸಿದ್ದರು. ಕೇರಳ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ವಿಧಾನಸಭೆಯ ಗ್ಯಾಲರಿಯಲ್ಲಿ ಉಪಸ್ಥಿತರಿದ್ದ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿ, ಅವರೊಂದಿಗೆ ಮಾತುಕತೆ ನಡೆಸುವ ಅವಕಾಶ ದೊರೆಯಿತು ಎಂದು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ತಿಳಿಸಿದ್ದಾರೆ.

ಗಡಿನಾಡಿನ ಪ್ರತಿನಿಧಿಯಾಗಿ ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲೇ ಕರ್ನಾಟಕದ ಸಚಿವರನ್ನು ಸ್ವಾಗತಿಸಲು ಸಾಧ್ಯವಾದದ್ದು ಹೆಮ್ಮೆಯ ಮತ್ತು ಸಂತೋಷದ ಕ್ಷಣವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ಭಾವನೆ, ಸಂಸ್ಕೃತಿ ಮತ್ತು ಆತ್ಮೀಯತೆಯ ಪ್ರತಿಬಿಂಬವಾಗಿದೆ. ಗಡಿನಾಡಿನಲ್ಲಿ ಕನ್ನಡ ಭಾಷೆಯ ಗೌರವವನ್ನು ಎತ್ತಿಹಿಡಿಯುವ ಇಂತಹ ಅವಕಾಶಗಳು ಸದಾ ಸ್ಮರಣೀಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಮತ್ತು ಕೇರಳದ ನಡುವಿನ ಸೌಹಾರ್ದ ಸಂಬಂಧ ಹಾಗೂ ಭಾಷಾ ಸಂಸ್ಕೃತಿಯ ಮಹತ್ವವನ್ನು ಈ ಭೇಟಿ ಮತ್ತೊಮ್ಮೆ ಎತ್ತಿ ತೋರಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!