ತಿರುವನಂತಪುರಂ : ಇಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಬಿ. ಪ್ರಕಾಶ್ ಮಾಥುರ್ ಅವರು ಕೇರಳದ 29ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜಭವನದಲ್ಲಿ ನಡೆದ ಈ ಅದ್ಧೂರಿ ಕಾರ್ಯಕ್ರಮದಲ್ಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಬೋಧಿಸಿದರು.
ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಮಿಳುನಾಡಿನ ರಾಜ್ಯಪಾಲರಾಗಿ ನಿಯೋಜನೆಗೊಂಡ ನಂತರ, ಬಿ. ಪ್ರಕಾಶ್ ಮಾಥುರ್ ಅವರು ಕೇರಳದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸ್ಪೀಕರ್ ಎ.ಎನ್. ಶಂಸೀರ್, ಸಚಿವರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದು, ನೂತನ ರಾಜ್ಯಪಾಲರಿಗೆ ಶುಭ ಕೋರಿದರು.

