ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ದಿಂದ ಕ್ಲಸ್ಟರ್ ಬಹಿಷ್ಕಾರ ಹಾಗೂ ಮನವಿ ಸಲ್ಲಿಕೆ

ಉಪ್ಪಳ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಪ್ರದೇಶಗಳಲ್ಲಿನ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಾಂವಿಧಾನಿಕ ಮತ್ತು ಭಾಷಾ ಹಕ್ಕುಗಳನ್ನು ಮರಳಿ ಸ್ಥಾಪಿಸುವ ಉದ್ದೇಶದಿಂದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನೇತೃತ್ವದಲ್ಲಿ ಕ್ಲಸ್ಟರ್ ಬಹಿಷ್ಕಾರ ನಡೆಸಲಾಯಿತು.

ತದನಂತರ ಮಂಜೇಶ್ವರ ಉಪಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಪಜಿಲ್ಲಾ ಕಚೇರಿಗೆ ಭೇಟಿ ನೀಡಿ, ಶಿಕ್ಷಕರ ಕೈ ಪಿಡಿಗಳನ್ನು ಒದಗಿಸಬೇಕು, ಶಾಸ್ತ್ರೋತ್ಸವ ಮತ್ತು ಕಲೋತ್ಸವಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೂ ಸಮಾನ ಅವಕಾಶಗಳನ್ನು ನೀಡಬೇಕು, ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು, ದ್ವಿ ಭಾಷಾ ಸ0ವಹನ ನೀತಿ ಜಾರಿಯಾಗಬೇಕು, ಎಂಬ ಬೇಡಿಕೆಯನ್ನೊಳಗೊಂಡ ಮನವಿಯನ್ನು ಉಪಜಿಲ್ಲಾ ವಿದ್ಯಾಧಿಕಾರಿಗಳಿಗೆ ನೀಡಲಾಯಿತು.

ನಿಯೋಗದಲ್ಲಿ ಉಪಜಿಲ್ಲಾ ಅಧ್ಯಕ್ಷರಾದ ಅಶೋಕ್ ಕೊಡ್ಲಮೊಗರು, ಕೇಂದ್ರ ಸಮಿತಿಯ ಅಧ್ಯಕ್ಷರಾದ ಸುಕೇಶ್ ,ಉಪಜಿಲ್ಲಾ ಕಾರ್ಯದರ್ಶಿ ಸುನೀಲ್ ,ಪದಾಧಿಕಾರಿಗಳಾದ ಜೀವನ್,ಕಿಶೋರ್,ರೂಪೇಶ್,ದಿವಾಕರ ಬಳ್ಳಾಲ್,ಜಯರಾಮ, ನೀತ ಮೊದಲಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!