ಮಂಜೇಶ್ವರ: ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಕುಂಬಳೆ ಸಮೀಪದ ಮೃಮೂನ ನಗರದಲ್ಲಿ ಪದವಿ ವಿದ್ಯಾರ್ಥಿಯೊಬ್ಬ ಮಲಗುವ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೀತಾಂಗೋಳಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಕುಂಬಳೆ ಮೃಮೂನ ನಗರ ದ ಹುಸೈನಾರ್ ಎಂಬವರ ಪುತ್ರ ಅಬ್ದುಲ್ ಅನ್ಸಾರ್ ಯಾನೆ ಅಜ್ಜು (19) ಸಾವನ್ನಪ್ಪಿದ ವಿದ್ಯಾರ್ಥಿ.ಕುಟುಂಬ ಮನೆಯಿಂದ ಹೊರಗೆ ತೆರಳಿದ ಸಂದರ್ಭ ಮನೆಯಲ್ಲಿ ಒಬ್ಬನೇ ಇದ್ದ ವೇಳೆ ಈತ ಈ ಕೃತ್ಯ ಎಸಗಿದ್ದಾನೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಸರಗೋಡು ಭಾಗದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಹೆಚ್ಚುತ್ತಿರುವುದು ಪೋಷಕರನ್ನು ಆತಂಕಕ್ಕೀಡು ಮಾಡಿದೆ.