ಒಂಟಿ ವಾಸದ ವೃದ್ಧ ಮಹಿಳೆ ನಿಗೂಢ ಸಾವು: ಕಳ್ಳತನ ಯತ್ನದ ವೇಳೆ ಕೊಲೆ ಶಂಕೆ

ಮಂಜೇಶ್ವರ : ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂದ್ಲಾಜೆಯ ಅಜಿಲ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪುಷ್ಪಾವತಿ (67) ಸಾವನ್ನಪ್ಪಿದ ದುರ್ದೈವಿ. ಮನೆಯ ಮಲಗುವ ಕೋಣೆಯಲ್ಲಿ ಅವರ ಶವ ಪತ್ತೆಯಾಗಿದ್ದು, ಕೋಣೆಯೊಳಗೆ ಎಳೆದಾಟ ಹಾಗೂ ಹೊಡೆದಾಟ ನಡೆದಿರುವ ಸ್ಪಷ್ಟ ಕುರುಹುಗಳು ಕಂಡುಬಂದಿವೆ.

ವೃದ್ಧೆಯ ಕೊರಳಲ್ಲಿದ್ದ ಕರಿಮಣಿ ಸರ ಕಾಣೆಯಾಗಿದ್ದು, ಮುಖದ ಮೇಲೆ ಉಗುರಿನಿಂದ ಪರಚಿದ ಗಾಯಗಳಿರುವುದು ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇದು ಸಹಜ ಸಾವು ಅಲ್ಲ, ಕೊಲೆ ಪ್ರಕರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ಅರಿತು ಬದಿಯಡ್ಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವೇಳೆ ಮಹಿಳೆ ಪ್ರತಿರೋಧ ತೋರಿದ ಕಾರಣ ಆಕೆಯನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!