ಕುಂಬಳೆ ಟೋಲ್ ಗೇಟ್ ಅನಧಿಕೃತ ಟೋಲ್ ಸಂಗ್ರಹ ವಿರೋಧಿಸಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಎದುರು ಜನಪ್ರತಿನಿಧಿಗಳ ಪ್ರತಿಭಟನೆ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಬಳೆ ಟೋಲ್ ಗೇಟ್ ಅನಧಿಕೃತ ಟೋಲ್ ಸಂಗ್ರಹದ ವಿರುದ್ಧ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ಜನಪ್ರತಿನಿಧಿಗಳ ಪ್ರತಿಭಟನಾ ಧರಣಿ ನಡೆಯಿತು.ಸೋಮವಾರದಂದು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಗೆ ಕಾಸರಗೋಡು ಶಾಸಕ ಎನ್ ಎ ನೆಲ್ಲಿಕುನ್ನು ಚಾಲನೆ ನೀಡಿದರು.

ಕೇಂದ್ರ ಸರಕಾರದ ನಿಬಂಧನೆಗಳನ್ನು ಉಲ್ಲಂಘಿಸಿ ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಾರ್ವಜನಿಕರಿಂದ ಅನ್ಯಾಯವಾಗಿ ಟೋಲ್ ಸಂಗ್ರಹ ನಡೆಸುತ್ತಿರುವುದು ಟೋಲ್ ಅಧಿಕಾರಸ್ಥರ ಅನ್ಯಾಯವಾಗಿದೆ. ಕೂಡಲೇ ಇದನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನಾ ಧರಣಿಯಲ್ಲಿ ವಿವಿಧ ಗ್ರಾಮ ಪಂಚಾಯತು, ಬ್ಲಾಕ್ ಪಂಚಾಯತು ಹಾಗೂ ಜಿಲ್ಲಾ ಪಂಚಾಯತು ಜನಪ್ರತಿನಿಧಿಗಳು ಪಾಲ್ಗೊಂಡರು.

SHARE
Loading spinner

Leave a Reply

Your email address will not be published. Required fields are marked *

error: Content is protected !!