ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆದ ಆದಿಶಿಲೆ ಪ್ರತಿಷ್ಠೆ

ಮಂಜೇಶ್ವರ:ಕನಿಲ ಶ್ರೀ ಭಗವತಿ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳು ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಇದರ ಅಂಗವಾಗಿ ಕ್ಷೇತ್ರದ ಅತಿಪ್ರಧಾನ ಧಾರ್ಮಿಕ ಕಾರ್ಯಕ್ರಮವಾದ ದಂಬೆ ಕಲ್ಲು ಆದಿಶಿಲೆ ಪ್ರತಿಷ್ಠೆ ಕಾರ್ಯಕ್ರಮವು ದಿನಾಂಕ 21.01.2026 (ಬುಧವಾರ) ಬೆಳಗ್ಗೆ 8 ಗಂಟೆಗೆ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಕ್ಷೇತ್ರದ ಆಚಾರಪಟ್ಟವರು, ಗುರಿಕಾರರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಎಲ್ಲಾ ಭಕ್ತಾದಿಗಳು ಭಾಗವಹಿಸುವಂತೆ ಕನಿಲ ಶ್ರೀ ಭಗವತಿ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ವಿನಂತಿಸಿದೆ.

ಶ್ರೀದೇವಿಯ ದಿವ್ಯ ಅನುಗ್ರಹಕ್ಕೆ ಪಾತ್ರರಾಗುವ ಈ ಪವಿತ್ರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಧಾರ್ಮಿಕ ಕಾರ್ಯಕ್ಕೆ ಸಹಕರಿಸಬೇಕೆಂದು ಸಮಿತಿಯವರು ಕೋರಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!