ಕೀರ್ತೇಶ್ವರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಪಾಡಿ ವಲಯದ ವತಿಯಿಂದ ಕೀರ್ತೇಶ್ವರದ ಶ್ರೀ ಕೀರ್ತೇಶ್ವರ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಭಕ್ತಿಭಾವಪೂರ್ಣವಾಗಿ ನೆರವೇರಿತು.

ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಪಾಡಿ ವಲಯದ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಉದಯ ಕುಮಾರ್ ಆನೆ ಬಾಗಿಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ವೃತಾಧಾರಿಗಳು ಸಂಕಲ್ಪಕ್ಕೆ ಕುಳಿತು, ಅವರ ಮುಂಭಾಗದಲ್ಲಿ ಸ್ವಸ್ತಿಕ ಚಿಹ್ನೆ ಅಂಕಿತಗೊಳಿಸುವ ಮೂಲಕ ವಿಶೇಷ ವಿಧಿವಿಧಾನಗಳೊಂದಿಗೆ ಪೂಜೆ ಸಂಪನ್ನಗೊಂಡಿತು.

ಪೂಜೆಯ ಬಳಿಕ ನಡೆದ ಕುಣಿತ ಭಜನೆ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಭಕ್ತರು ಭಕ್ತಿ-ಸಂಭ್ರಮದಿಂದ ಭಾಗವಹಿಸಿ ದೇವನಾಮ ಸ್ಮರಣೆಯಲ್ಲಿ ತಲ್ಲೀನರಾದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಧಾರ್ಮಿಕ ಕಾರ್ಯಕ್ರಮಕ್ಕೆ ಶ್ರದ್ಧಾಭಕ್ತಿಯಿಂದ ಸಹಕರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!