ಕಾಸರಗೋಡು : ಅಗಸರ ಯಾನೆ ಮಡಿವಾಳರ ಸಂಘ, ಕಾಸರಗೋಡು ಜಿಲ್ಲೆ ಇವರ ಆಶ್ರಯದಲ್ಲಿ ಸಮಾಜೋತ್ಸವ ಹಾಗೂ ಗುರು ಮಾಚಿದೇವ ಜಯಂತಿ ದಿನಾಚರಣೆ ಕಾರ್ಯಕ್ರಮವು ಫೆಬ್ರವರಿ 1, 2026 (ಭಾನುವಾರ) ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಕಣ್ಣೂರು, ಎಡನಾಡು ಸೇವಾ ಸಹಕಾರಿ ಬ್ಯಾಂಕ್ ಹಾಲ್, ಸೂರಂಬೈಲ್ನಲ್ಲಿ ನಡೆಯಲಿದ್ದು, ವಿವಿಧ ಘನಾತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮಾಜದ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದ್ದು, ನಂತರ ಗುರು ಮಾಚಿದೇವ ಕರೋಕೆ ಮ್ಯೂಸಿಕ್ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ.ಇದಲ್ಲದೆ, 2024–2025ನೇ ಶೈಕ್ಷಣಿಕ ವರ್ಷದ 8ನೇ ತರಗತಿಯಿಂದ +2 ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮವೂ ನಡೆಯಲಿದೆ.
ಸಮಾಜದ ಎಲ್ಲಾ ಬಂಧು-ಬಾಂಧವರು, ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.