ಚೇವಾರು ಶ್ರೀ ಶಾರದಾ ಎ.ಯು.ಪಿ. ಶಾಲೆಯಲ್ಲಿ ಸಂಭ್ರಮದ ‘ಶಾಲಾ ವಾರ್ಷಿಕೋತ್ಸವ’

ಮಂಜೇಶ್ವರ: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಶಾಲಾ ಆವರಣದಲ್ಲಿ ಬಹಳ ಸಂಭ್ರಮದಿಂದ ಜರುಗಿತು.ಸಂಜೆ 6:30ಕ್ಕೆ ಆರಂಭಗೊಂಡ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೈವಳಿಕೆ ಪಂಚಾಯತ್‌ನ ಚೇವಾರು ವಾರ್ಡ್ ಸದಸ್ಯರಾದ ಶ್ರೀ ಅಬ್ದುಲ್ ಅಸೀಸ್ ಸಿ. ಎಂ. ಅವರು ವಹಿಸಿದ್ದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶಾಲೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬದ್ರುನ್ನಿಸಾ ಸಲೀಂ, ಮಂಜೇಶ್ವರ ಉಪ ಜಿಲ್ಲಾ ವಿದ್ಯಾಧಿಕಾರಿ ಶ್ರೀ ಜಾರ್ಜ್ ಕ್ರಾಸ್ತಾ, ಪಂಚಾಯತ್ ಸದಸ್ಯರಾದ ಶ್ರೀ ಶ್ರೀನಿವಾಸ ಕೆ. ಎಚ್. ಹಾಗೂ ಮಾಜಿ ಪಂಚಾಯತ್ ಅಧ್ಯಕ್ಷರಾದ ಶ್ರೀ ಅಚ್ಯುತ ಚೇವಾರು,ಶಾಲಾ ವ್ಯವಸ್ಥಾಪಕರಾದ ಶ್ರೀಮತಿ ನಳಿನಿ,ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಅವರು ಶುಭ ಹಾರೈಸಿದರು.

ಸನ್ಮಾನ ಮತ್ತು ಗೌರವ:
ಇದೇ ಸಂದರ್ಭದಲ್ಲಿ, 2026ರ ಏಪ್ರಿಲ್ 30ರಂದು ನಿವೃತ್ತಿಗೊಳ್ಳಲಿರುವ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶ್ಯಾಮ್ ಭಟ್ ಯು. ಅವರನ್ನು ಶಾಲಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಅಲ್ಲದೆ, ಕಳೆದ 8 ವರ್ಷಗಳಿಂದ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಅಬ್ದುಲ್ ಅಸೀಸ್ ಸಿ.ಎಂ. ಹಾಗೂ ಉದ್ಯಮಿ ಸಮಾಜ ಸೇವಕರಾದ ಮೊಹಮ್ಮದ್ ಸಲೀಂ ಚೇವಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಮಾ.ಪಿ.ಎಸ್, ಮಾನ್ವಿ ಆರ್.ಎಸ್.ನಾಯಕ್, ನವೋದಯ ವಿದ್ಯಾಲಯಕ್ಕೆ ಪ್ರವೇಶಾತಿ ಪಡೆಯಲು ಅರ್ಹತೆ ಪಡೆದ ವಂಶಿತಾ.ಎಂ ಹಾಗೂ ಪ್ರತಿಭಾವಂತ ಹಳೆ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಶಿಕ್ಷಕಿ ಪ್ರಮೀಳಾ ಡಿ.ಎನ್ ಸನ್ಮಾನ ಪತ್ರ ವಾಚಿಸಿದರು.ಶಿಕ್ಷಕ ಸಾತ್ವಿಕ್.ಎನ್ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿರ್ವಹಿಸಿದರು.

ಸಾಂಸ್ಕೃತಿಕ ವೈಭವ:
ಸಭಾ ಕಾರ್ಯಕ್ರಮಕ್ಕೆ ಮುನ್ನ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು. ಸಭೆಯ ನಂತರ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಹಳೆಯ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನರಂಜಿಸಿದವು.

ಈ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ರವಿ ಕುಮಾರ್ ವರದಿ ಮಂಡಿಸಿದರು.ಹಿರಿಯ ಶಿಕ್ಷಕಿ ರಾಜೇಶ್ವರಿ.ಬಿ ಸ್ವಾಗತಿಸಿ, ಹ್ಯಾರಿಸ್ ವಂದಿಸಿದರು.ಪ್ರಸಾದ್ ರೈ, ಪ್ರೀಮಾ ಕ್ರಾಸ್ತಾ, ಮೊಹಮ್ಮದ್ ಫಾಯಿಸ್, ಗೀತಾಂಜಲಿ ಟೀಚರ್ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರಾದ ರತೀಶ್.ಎ, ಕವಿತಾ ಟೀಚರ್,ಶ್ಯಾಮಿನಿ,ಆಶಾಲತಾ, ಗೋಪಾಲ ಕೃಷ್ಣ ಭಟ್ ಸಹಕರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!