ಮಂಗಲ್ಪಾಡಿ: ಮಂಗಲ್ಪಾಡಿಯ ಕುಕ್ಕರ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ರ್ಯಾಗಿಂಗ್ ನಡೆಸಿ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.ಮಧ್ಯಾಹ್ನದ ಊಟ ಸೇವಿಸುವ ವೇಳೆ ವಿದ್ಯಾರ್ಥಿ ಮಹಮ್ಮದ್ ಬಿಷ್ರಾನ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಕಣ್ಣಿಗೆ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.