ಮಂಜೇಶ್ವರ: ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸುವ ಸಮಾರಂಭಗಳು ಮತ್ತು ಕಾರ್ಯಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಜಾರಿಯಲ್ಲಿದ್ದ ನಿಯಮ ಪಾಲನೆಯಾಗದ ಹಿನ್ನೆಲೆಯಲ್ಲಿ, ಅತಿಯಾದ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿ ಹೆಚ್ಚಿದಂತೆ ದೂರುಗಳು ಹೆಚ್ಚಾಗಿವೆ.
ಈ ಹಿನ್ನೆಲೆ ಎಲ್ಲಾ ಪೊಲೀಸ್ ಠಾಣೆಗಳಿಗೆ ರಾತ್ರಿ 10 ನಂತರ ಧ್ವನಿವರ್ಧಕ ಬಳಕೆಯಾದಲ್ಲಿ ಅದನ್ನು ವಶಪಡಿಸಿಕೊಂಡು ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈಗಾಗಲೇ ರಾತ್ರಿ ಗಸ್ತು ಬಿಗುಗೊಳಿಸಲಾಗಿದ್ದು, ದೂರು ಬಂದರೆ ಅಥವಾ ನೇರವಾಗಿ ಪತ್ತೆಯಾದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದು ಠಾಣಾಧಿಕಾರಿ ಪಿ. ಅಜಿತ್ ಕುಮಾರ್ ತಿಳಿಸಿದ್ದಾರೆ