ಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ವರ್ಕಿಂಗ್ ಗ್ರೂಪ್ ರಚನೆ

ಮಂಜೇಶ್ವರ: ಜನರ ಅಗತ್ಯತೆಯ ಬೇಡಿಕೆಗಳು ಹಾಗೂ ಸ್ಥಳೀಯ ಅಭಿವೃದ್ಧಿ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಮಂಜೇಶ್ವರ ಗ್ರಾಮ ಪಂಚಾಯತಿಯ ಅಧೀನದಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಅಭಿವೃದ್ಧಿ ವರ್ಕಿಂಗ್ ಗ್ರೂಪ್ ಅನ್ನು ರಚಿಸಲಾಯಿತು. ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ವರ್ಕಿಂಗ್ ಗ್ರೂಪ್ ರಚನೆಗೊಳಿಸಲಾಯಿತು.

ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಮೂಲಸೌಕರ್ಯ ಅಭಿವೃದ್ಧಿ, ಸಾಮಾಜಿಕ–ಆರ್ಥಿಕ ಪ್ರಗತಿಗೆ ಒತ್ತು ನೀಡುವ ಸಮಗ್ರ ಯೋಜನೆಗಳನ್ನು ತಯಾರಿಸುವುದು ವರ್ಕಿಂಗ್ ಗ್ರೂಪ್‌ನ ಪ್ರಮುಖ ಜವಾಬ್ದಾರಿಗಳಾಗಿವೆ. ಜನರ ಭಾಗವಹಿಸುವಿಕೆಯಿಂದ ಯೋಜನೆಗಳನ್ನು ಜಾರಿಗೊಳಿಸುವ ರೂಪರೇಖೆಯನ್ನೂ ಸಭೆಯಲ್ಲಿ ಚರ್ಚಿಸಲಾಯಿತು.

ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ, ಉಪಾಧ್ಯಕ್ಷೆ ಸಹುರ, ಆಡಳಿತ ಸಮಿತಿಯ ಸದಸ್ಯರು, ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡರು.

SHARE
Loading spinner

Leave a Reply

Your email address will not be published. Required fields are marked *

error: Content is protected !!