ವಿಷ ಸೇವಿಸಿ ಚಿಕಿತ್ಸೆಗೊಳಗಾಗಿದ್ದ ಯುವಕ ಸಾವು

ಮಂಜೇಶ್ವರ: ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೂ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ತಲಪಾಡಿ ಮರಿಯಾಶ್ರಮ ಚರ್ಚ್ ಕಂಪೌಂಡ್ ಸಮೀಪದ ನಿವಾಸಿ ಅಶೋಕ ಕ್ರಾಸ್ತ (32) ಮೃತ ದುರ್ದೈವಿ.

ಮಂಗಳೂರಿನ ಅಂಗಡಿಯೊಂದರಲ್ಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಅವಿವಾಹಿತರಾದ ಅಶೋಕ ಕ್ರಾಸ್ತ ಅವರು ಜನವರಿ 31ರಂದು ರಾತ್ರಿ ಸುಮಾರು 8 ಗಂಟೆಗೆ ತಮ್ಮ ನಿವಾಸದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಸಾವು ಸಂಭವಿಸಿದೆ.

ಈ ಕುರಿತು ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶವದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!