ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೂಮಿನಾಡು: ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಏಪ್ರಿಲ್ 2ರಿಂದ 6ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಕಾಸರಗೋಡು ಜಿಲ್ಲಾ ಕುಲಾಲ ಸಭಾ ಭವನದಲ್ಲಿ ಬುಧವಾರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಸರಳವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಶಿವಕೃಪೆ ಕುಂಜತ್ತೂರು ವಹಿಸಿ, ಉತ್ಸವದ ರೂಪುರೇಷೆಗಳನ್ನು ವಿವರಿಸಿದರು. ಕುಂಜತ್ತೂರು–ತೂಮಿನಾಡು ಪ್ರದೇಶದ ವಿವಿಧ ಸಂಘ ಸಂಸ್ಥೆಗಳು ಹಾಗೂ ಭಕ್ತಾದಿಗಳು ತನು ಮನ ಧನಗಳಿಂದಸಹಕಾರದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಅವರು ವಿನಂತಿಸಿದರು. ಕಾರ್ಯಕ್ರಮದಲ್ಲಿ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!