ಮಂಜೇಶ್ವರ: ಅಸೌಖ್ಯದಿಂದ ಬಳಲುತಿದ್ದ ಚಕ್ಕಿಗುಡ್ಡೆ ನಿವಾಸಿ ಮಧ್ಯವಯಸ್ಕ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 20ನೇ ವಾರ್ಡ್‌ನ ಚಕ್ಕಿಗುಡ್ಡೆಯಲ್ಲಿ ಈ ಘಟನೆ ವರದಿಯಾಗಿದೆ. ಚಕ್ಕಿಗುಡ್ಡೆ ನಿವಾಸಿ ಗೀತಾ ಎಂಬುವವರೇ ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಗೀತಾ ಅವರು ಮನೆಯ ಸಮೀಪದ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗೀತಾ ಅವರನ್ನು ಬಾವಿಯಿಂದ ಮೇಲೆತ್ತಿದ್ದಾರೆ. ಬಳಿಕ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಸದ್ಯ ಮೃತದೇಹವನ್ನು ಮಂಗಲ್ಪಾಡಿ ಶವಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.