ಬದಿಯಡ್ಕ: ಭಾರತೀಯ ಜನತಾ ಪಾರ್ಟಿ ಬದಿಯಡ್ಕ ಸಾಂಘಿಕ ಮಂಡಲದ ವತಿಯಿಂದ ಕಾರ್ಯಕರ್ತರ ಶಿಲ್ಪಶಾಲೆ ಮಾರ್ಪನಡ್ಕದ ಶ್ರೀ ಪಾಂಚಜನ್ಯ ಆಡಿಟೋರಿಯಂನಲ್ಲಿ ನಡೆಯಿತು. ಈ ಶಿಲ್ಪಶಾಲೆಯನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದು. ಗ್ರಾಮ ಮಟ್ಟದಿಂದಲೇ ಸಂಘಟನೆ ಬಲಿಷ್ಠವಾಗಬೇಕು. ಕಾರ್ಯಕರ್ತರು ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಮತ್ತಷ್ಟು ಚುರುಕುಗೊಳಿಸುವ ಅಗತ್ಯವಿದೆ ಎಂದು ಹೇಳಿದರು.
ಶಿಲ್ಪಶಾಲೆಯಲ್ಲಿ ಪಕ್ಷದ ಕಾರ್ಯಪದ್ಧತಿ, ಸಂಘಟನೆ ವಿಸ್ತರಣೆ, ಬೂತ್ ಮಟ್ಟದ ಕಾರ್ಯಚಟುವಟಿಕೆಗಳು ಹಾಗೂ ಸಾರ್ವಜನಿಕ ಸಂಪರ್ಕದ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಹಾಗೂ ಮಂಡಲದ ಪ್ರಮುಖ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವು ಕಾರ್ಯಕರ್ತರಲ್ಲಿ ಉತ್ಸಾಹವನ್ನು ಮೂಡಿಸಿತು.