ಸ್ತನ ಹಾಗೂ ಬಾಯಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ

ಉಪ್ಪಳ , ಮಾ.11: ಬೀಡಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಇಂದು ಬೇಕುರಿನಲ್ಲಿ ಆಯೋಜಿಸಲಾಯಿತು.
ಬೇಕುರು ಸಮೀಪದ ಸುಬಾಶ್ ನಗರದಲ್ಲಿರುವ ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿಯಲ್ಲಿ ಮಧ್ಯಾಹ್ನ 1.30 ಕ್ಕೆ ಶಿಬಿರ ನಡೆಯಿತು.
ಈ ಶಿಬಿರವನ್ನು ಬಿಡಬ್ಲ್ಯುಡಬ್ಲ್ಯುಎಫ್ (BWWF) ಡಿಸ್ಪೆನ್ಸರಿ ಮಂಜೇಶ್ವರ ಮತ್ತು ಎಲ್‌ಡಬ್ಲ್ಯುಒ ಕೇರಳಂ ವತಿಯಿಂದ, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ಡಾ. ನಿವೇದಾ ಬಿ.ಆರ್ (MBBS), ಎಂಎಸ್ ಜನರಲ್ ಸರ್ಜರಿ, FMAS ಅವರು ಭಾಗವಹಿಸಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿದರು ಹಾಗೂ ತಪಾಸಣೆ ನಡೆಸಿದರು. ಶಿಬಿರದಲ್ಲಿ ಭಾಗವಹಿಸಿದ ಕಾರ್ಮಿಕರಿಗೆ ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸೆ ಕುರಿತು ಮಾಹಿತಿ ನೀಡಲಾಯಿತು.
ಈ ವೇಳೆ ಪ್ರಧಾನ ಮಂತ್ರಿ ಶ್ರಮ ಯೋಗಿ ಮಂಥನ್ (PMSYM )ಹೆಲ್ಪ್‌ಡೆಸ್ಕ್ ಸಹ ವ್ಯವಸ್ಥೆ ಮಾಡಲಾಗಿದ್ದು, ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಕುರಿತು ಮಾರ್ಗದರ್ಶನ ನೀಡಲಾಯಿತು.
ಶಿಬಿರದಲ್ಲಿ ಹಲವಾರು ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಆಯೋಜಕರು ಇಂತಹ ಆರೋಗ್ಯ ಶಿಬಿರಗಳು ಸಮಾಜದಲ್ಲಿ ಜಾಗೃತಿ ಮೂಡಿಸಲು ಸಹಕಾರಿ ಆಗುತ್ತವೆ ಎಂದು ಅಭಿಪ್ರಾಯಪಟ್ಟರು

SHARE
Loading spinner

Leave a Reply

Your email address will not be published. Required fields are marked *

error: Content is protected !!