ಬೆಂಗ್ರೆ ಕಣ್ವತೀರ್ಥ: ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ (ರಿ) ಬೆಂಗ್ರೆ ಕಣ್ವತೀರ್ಥ, ಶ್ರೀ ಭಗವತಿ ಕೃಪಾ ಬಾಲಾಂಜನೇಯ ವ್ಯಾಯಾಮ ಶಾಲೆ (ರಿ) ಬೆಂಗ್ರೆ ಕಣ್ವತೀರ್ಥ, ಜಗದ್ಗುರು ಶ್ರೀ ನಿತ್ಯಾನಂದ ಮಹಾ ಪೀಠಮ್ ಚಾರಿಟೇಬಲ್ ಟ್ರಸ್ಟ್ (ರಿ) ಕೊಂಡೇವೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರಕ್ಕೆ ಒನ್ ಸೈಟ್ ಎಸ್ಪಿಲೋರ್ ಲಕೋಟಿಕಾ ಫೌಂಡೇಶನ್, ಬೆಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಂಗಳೂರು, ಹಾಗೂ ಡಾ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸಹಯೋಗ ನೀಡುತ್ತಿದೆ. ಜೊತೆಗೆ ಶ್ರೀ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ತಲಪಾಡಿ, ಮಂಗಳೂರು ಇವರ ಸಹಯೋಗದಲ್ಲಿ ಆಯುರ್ವೇದ ಚಿಕಿತ್ಸಾ ಶಿಬಿರವೂ ನಡೆಯಲಿದೆ.
ಶಿಬಿರವು ಮಾರ್ಚ್ 15, 2026ರ ಆದಿತ್ಯವಾರ ಬೆಳಗ್ಗೆ 9 ಗಂಟೆಗೆ ಎ.ಎಲ್.ಪಿ ಉದ್ಯಾವರ ಭಗವತೀ ಶಾಲೆ, ಕಣ್ವತೀರ್ಥದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಭಾಗವಹಿಸುವವರಿಗೆ ಕಣ್ಣಿನ ಉಚಿತ ತಪಾಸಣೆ ನಡೆಸಲಾಗುವುದು. ಅಗತ್ಯವಿರುವವರಿಗೆ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಶಿಬಿರದಲ್ಲಿ ಭಾಗವಹಿಸಲು ಆಸಕ್ತರು ಬೆಳಗ್ಗೆ 8.30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಆಯೋಜಕರು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
📞 9964397203
📞 9544884587