ಪೈವಳಿಕೆ: ಪೈವಳಿಕೆ–ಲಾಲ್ ಬಾಗ್–ಚಿಪ್ಪಾರ್–ಕುರುಡಪದವು ಸಂಪರ್ಕಿಸುವ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ವಾಹನ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಇಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಸುಮಾರು ಮೂರು ವರ್ಷಗಳ ಹಿಂದೆ ಈ ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದರೂ ಬಳಿಕ ಬಂಡವಾಳ ಕೊರತೆ ಕಾರಣ ನೀಡಿ ಪುನಃ ಟೆಂಡರ್ ಪಾಸ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಕಳೆದ ಮೂರು ತಿಂಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಬಸ್ ಮಾಲಕರು ದೈನಂದಿನ ಸಂಚಾರದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅಶ್ವಿನಿ ಎಂ.ಎಲ್ ಅವರು, ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ , ಪಂಚಾಯತ್ ಏರಿಯಾ ಅಧ್ಯಕ್ಷರುಗಳಾದ ಸತ್ಯ ಶಂಕರ್ ಭಟ್ , ಸುಬ್ರಮಣ್ಯ ಭಟ್ ಹಾಗು ಪಂಚಾಯತ್ ಬಿಜೆಪಿ ಸದಸ್ಯರು , ಗ್ರಾಮಸ್ಥರು ಉಪಸ್ಥಿತರಿದ್ದರು.