ಮೂಡಂಬೈಲ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆ.

ಸರಕಾರಿ ಪ್ರೌಢಶಾಲೆ ಮೂಡಂಬೈಲ್ ನಲ್ಲಿ ಜಿಲ್ಲಾ ಪಂಚಾಯತಿನ ವತಿಯಿಂದ ಒದಗಿಸಲಾದ ಆಧುನಿಕ ವ್ಯವಸ್ಥೆಯನ್ನು ಒಳಗೊಂಡಿರುವ ಶೌಚಾಲಯವನ್ನು ಹಾಗೂ ಶುದ್ಧ ಜಲ ನೀರಿನ ಯೋಜನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಕಮಲಾಕ್ಷಿ ಅವರು ನಿರ್ವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ಲಾ ಪಜಿಂಗರ್ ಅವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಿಂಚಾಯತ್ ಉಪಾಧ್ಯಕ್ಷರಾದ ಜಯರಾಮ ಬಲ್ಲಂಗುಡೆಯಲು ಹಾಗೂ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಯಾದ ಜಾರ್ಜ್ ಕ್ರಾಸ್ತಾರವರು ಸಭೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ದಯಾವತಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕರಾದ ಪ್ರತೀಶ್ ರವರು ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮದ ನಿರ್ವಹಣೆಯನ್ನು ರಾಜೇಶ್ ಕೊಡ್ಲ ಮೊಗರು ನಡೆಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!