ಕುಂಜತ್ತೂರು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ K. Surendran ಅವರಿಗೆ ತೂಮಿನಾಡು ಪ್ರದೇಶದಲ್ಲಿ ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ವತಿಯಿಂದ ಭರ್ಜರಿ ಸ್ವಾಗತ ನೀಡಲಾಯಿತು.
ಕಾರ್ಯಕ್ರಮಕ್ಕೆ ಹುಲಿ ವೇಷ ಮತ್ತು ತಾಸೆ ಮೇಳದೊಂದಿಗೆ ಸಂಭ್ರಮದ ಚಾಲನೆ ನೀಡಲಾಯಿತು. ಬಳಿಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುರೇಂದ್ರನ್, ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿ ಮೂಲಕ ಮಾತ್ರ ಸಾಧ್ಯವೆಂದು ಹೇಳಿದರು.
ಕಳೆದ 40 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸಿದವರು ಮಂಜೇಶ್ವರವನ್ನು ಅಭಿವೃದ್ಧಿಯಿಂದ ಹಿಂದೆ ಉಳಿಸಿದ್ದಾರೆ ಎಂದು ಆರೋಪಿಸಿದ ಅವರು, ಕೇಂದ್ರದಲ್ಲಿ Narendra Modi ಅವರ ನೇತೃತ್ವದ ಬಿಜೆಪಿ ಸರ್ಕಾರ ಇರುವುದರಿಂದ, ಮಂಜೇಶ್ವರದಲ್ಲಿ ಬಿಜೆಪಿ ಶಾಸಕ ಆಯ್ಕೆಯಾದರೆ ಆಧುನಿಕ, ಉದ್ಯೋಗ ಆಧಾರಿತ ಹಾಗೂ ಸ್ಥಳೀಯ ಕನ್ನಡ ಭಾಷಿಕರ ಬೇಡಿಕೆಗಳಿಗೆ ಸ್ಪಂದಿಸುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಮಂಜೇಶ್ವರದ ಸಮಗ್ರ ಅಭಿವೃದ್ಧಿಗಾಗಿ ಅಗತ್ಯವಾದ ವಿವಿಧ ಯೋಜನೆಗಳನ್ನು ಜನರ ಮುಂದೆ ಇಡಲಾಗುವುದು ಎಂದೂ ಅವರು ಹೇಳಿದರು.
ಈ ವೇಳೆ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ಪ್ರಸ್ತುತ ಶಾಸಕ A. K. M. Ashraf ಅವರ ಮೇಲೆ ಟೀಕೆ ನಡೆಸಿ, ಕಳೆದ ಐದು ವರ್ಷಗಳಲ್ಲಿ ಕ್ಷೇತ್ರ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಯಾದವ ಬಡಾಜೆ, ಪದ್ಮನಾಭ ಕಡಪರ, ನ್ಯಾಯವಾದಿ ನವೀನ್ ರಾಜ್, ಸುರೇಶ್ ಶೆಟ್ಟಿ, ಕಾರ್ತಿಕ್ ಶೆಟ್ಟಿ, ಪವನ್ ಅಂಜರೆ, ಆಶಾಲತಾ, ಸಂತೋಷ್ ಅಡ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.