ಬೆಳಿಂಜದಲ್ಲಿ ಕಿನ್ನಿಮಾಣಿ ಯುವಕೇಂದ್ರದ 44ನೇ ವಾರ್ಷಿಕೋತ್ಸವ: ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು

ಬೆಳಿಂಜ: ಶ್ರೀ ಪೂಮಾಣಿ ಕಿನ್ನಿಮಾಣಿ ಯುವಕೇಂದ್ರದ 44ನೇ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಬೆಳಂಜ ಕಿನ್ನಿಗೋಳಿ ಮಾಡದ ಜಾತ್ರೋತ್ಸವದ ಸುಸಂದರ್ಭದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾರ್ಚ್ 22 ಮತ್ತು 23ರಂದು ಆಯೋಜಿಸಲಾಗಿದೆ.

ಮಾರ್ಚ್ 22, ಭಾನುವಾರ ಬೆಳಿಗ್ಗೆ 8.30ಕ್ಕೆ ದೀಪಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಬಳಿಕ ಬೆಳಿಗ್ಗೆ 9 ಗಂಟೆಯಿಂದ ಶ್ರೀ ಮಹಾವಿಷ್ಣು ಭಜನಾ ಸಂಘ, ಆಲಿಂಜ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10.30ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಪ್ರಸಾದ ನಡೆಯಲಿದೆ.

ಮಾರ್ಚ್ 23, ಸೋಮವಾರ ಸಂಜೆ 6.30ಕ್ಕೆ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ರಾತ್ರಿ 10 ಗಂಟೆಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ.

ಇದೇ ದಿನ ರಾತ್ರಿ 10.30ರಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಯಕ್ಷಗಾನ ಕಲಾ ಮಂಡಳಿ, ಸುಬ್ರಹ್ಮಣ್ಯ ಇವರಿಂದ “ಗುಳಿಗ-ಶಿವಗುಳಿಗ” ಎಂಬ ತುಳು ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!