ಮಂಜೇಶ್ವರ ವಿಧಾನಸಭಾ ಕ್ಷೇತ್ರ: ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ಅವರು ಸೋಮವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಉಪ್ಪಳ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಕಾರ್ಯಕರ್ತರು ಉಪ್ಪಳ ಪಟ್ಟಣದ ವಿವಿಧ ಭಾಗಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು. ಪಕ್ಷದ ಧ್ವಜಗಳನ್ನು ಹಿಡಿದು ಸಾಗಿದ ಮೆರವಣಿಗೆಗೆ ಸ್ಥಳೀಯರಿಂದ ಗಮನಾರ್ಹ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶ್ರಫ್ ಬಡಾ ಜೆ ಅವರು, ಕ್ಷೇತ್ರದ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವುದು ತಮ್ಮ ಪ್ರಮುಖ ಆದ್ಯತೆ ಎಂದು ಹೇಳಿದರು. ಜನರ ವಿಶ್ವಾಸದೊಂದಿಗೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಸಾಧಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ನಾಮಪತ್ರ ಸಲ್ಲಿಕೆಯಿಂದ ಮಂಜೇಶ್ವರ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!