ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕನಿಲ: ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಏಪ್ರಿಲ್ 18ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಏಪ್ರಿಲ್ 26ರಿಂದ ಮೇ 3ರವರೆಗೆ ಭರಣಿ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಈ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಅಸ್ತ್ರ ಗ್ರೂಪ್ ಮಾಲಕ, ನಿರ್ಮಾಪಕ ಹಾಗೂ ನಟ ಲಂಚುಲಾಲ್ ಕೆ.ಎಸ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಕುದುರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಕಡಪುರ, ದೇವದಾಸ್ ವರ್ಕಾಡಿ, ವಿಜಯ ಕನಿಲ, ಲಕ್ಷ್ಮಣ್ ಸಾಲಿಯಾನ್, ಯತೀಶ್ ಸೇರಿದಂತೆ ಕ್ಷೇತ್ರದ ಆಚಾರ್ಯರು , ಸಮಿತಿ ಪದಾಧಿಕಾರಿಗಳು, ಮಹಿಳಾ ಸಮಿತಿ ಪದಾಧಿಕಾರಿಗಳಾದ ಮೋತಿ ಕಿರಣ್, ಶ್ಯಾಮಲಾ ಉಮೇಶ್ ಮತ್ತು ಚಂಚಲಾಕ್ಷಿ ಪದ್ಮನಾಭ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ ಅಧ್ಯಕ್ಷ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಸ್ವಾಗತಿಸಿ , ಹರೀಶ್ ಶೆಟ್ಟಿ ಮಾಡ ಧನ್ಯವಾದವಿತ್ತರು.

ಬ್ರಹ್ಮಕಲಶೋತ್ಸವ ಮತ್ತು ಭರಣಿ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಕ್ಷೇತ್ರದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!