ಮಂಜೇಶ್ವರ: ಕುಂಬಳೆ ಶಿರಿಯ ಹೊಳೆಯಿಂದ ಅನಧಿಕೃತವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯ ಮೇಲೆ ಕುಂಬಳೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹೇರೂರು ಗ್ರಾಮದ ಪಯ್ಯಾರ್ ಕಡವಿನಲ್ಲಿ ಈ ಕಾರ್ಯಾಚರಣೆ ನಡೆದಿದೆ. ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸರ್ಕಾರಿ ಸ್ವತ್ತಾದ ಹೊಳೆ ಮರಳನ್ನು ಕಳವು ಮಾಡಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದಾಳಿಯ ವೇಳೆ ಲಾರಿ ಚಾಲಕ ಸೇರಿದಂತೆ ಐವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ವಿರುದ್ಧ ಪೊಲೀಸರು ಜಾಮೀನು ರಹಿತ ಕಳವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಳು ಮಾಫಿಯಾದ ವಿರುದ್ಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.