ಕಾಸರಗೋಡು: ಚುನಾವಣಾ ಕಣ ದಿನೇದಿನೇ ಕಾವೇರಿಸುತ್ತಿರುವ ಹಿನ್ನೆಲೆಯಲ್ಲಿ ಸುರೇಶ್ ಗೋಪಿ ಅವರು ಮುಳ್ಳೇರಿಯಾ ಹಾಗೂ ಕಾಸರಗೋಡು ಕಸಬಾ ಕಡಪ್ಪುರ ಪ್ರದೇಶಗಳಲ್ಲಿ ಭರ್ಜರಿ ರಾಜಕೀಯ ಪ್ರಚಾರ ನಡೆಸಿದರು.
ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ ಅವರು, ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಮುಳ್ಳೇರಿಯಾ ಮತ್ತು ಕಸಬಾ ಕಡಪ್ಪುರದಲ್ಲಿ ನಡೆದ ಸಭೆಗಳಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸಾಹ ವ್ಯಕ್ತಪಡಿಸಿದರು. ಸುರೇಶ್ ಗೋಪಿಯವರ ಆಗಮನದಿಂದ ಪ್ರಚಾರಕ್ಕೆ ಹೊಸ ಚೈತನ್ಯ ಸಿಕ್ಕಿದಂತಾಗಿದೆ ,
ಸಭೆಯಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಪ್ರಧಾನಿ ನೇತೃತ್ವದ ಸರ್ಕಾರ ಕೈಗೊಂಡಿರುವ ವಿವಿಧ ಜನಪರ ಯೋಜನೆಗಳನ್ನು ಮುಂದುವರಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅಶ್ವಿನಿ ಎಂ ಎಲ್ , ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಪ್ರಚಾರಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಇರುವಾಗ ಈ ಪ್ರಚಾರ ಸಭೆ ಮತ್ತು ಸುರೇಶ್ ಗೋಪಿಯಂತ ಕೇoದ್ರ ಮಂತ್ರಿಗಳು ಪ್ರಚಾರ ಸಭೆಗಳಲ್ಲಿ ಭಾಗಿಯಾಗುವುದು ಬಿ ಜೆ ಪಿ ಗೆ ಮತ್ತೂ ಬಲ ನೀಡಿದಂತಾಗಿದೆ.