ಬೆಜ್ಜ ಮೂಡಂಬೈಲು: ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ , ಕೋಳಿಗೂಟ ಮತ್ತು ಉತ್ಸವದ ಚೆಂಡು ಆರಂಭಗೊಂಡು 6 ರಿಂದ 9 ರವರೆಗೆ ಭಕ್ತಿಭಾವದಿಂದ ದೈವಗಳ ಉತ್ಸವ ನಡೆಯಲಿದೆ.
ಉತ್ಸವವು ಬುಧವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಗ್ರಾಮಸ್ಥರು ಹಾಗೂ ಕ್ಷೇತ್ರ ಸೇವಾ ಸಮಿತಿಯವರ ಸಹಕಾರದಲ್ಲಿ ಮಹೋತ್ಸವವನ್ನು ಆಯೋಜಿಸಲಾಗಿದೆ.
ಭಕ್ತರು ತಮ್ಮ ಬಂಧು-ಮಿತ್ರರೊಂದಿಗೆ ಆಗಮಿಸಿ ತನು-ಮನ-ಧನಗಳಿಂದ ಸಹಕರಿಸಿ, ಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.