ಚುನಾವಣಾ ಸಿದ್ಧತೆ ಪರಿಶೀಲನೆ: ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ

ಮಂಜೇಶ್ವರ:
ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಇವಿಎಂ ಮತ್ತು ವಿವಿಪ್ಯಾಟ್ ಭದ್ರತಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ರಾಜ್ಯದ ಪ್ರಥಮ ಸಂಖ್ಯೆಯ ಬೂತ್ ಆಗಿರುವ ಕುಂಜತ್ತೂರು ಸರ್ಕಾರಿ ಶಾಲೆ ಹಾಗೂ ಸೂಕ್ಷ್ಮ ಮತಗಟ್ಟೆಗಳಾದ ಕಣ್ವತೀರ್ಥ, ಆಲಂಪಾಡಿ ಮತ್ತು ಚೆರ್ಕಳ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಅವಲೋಕಿಸಿದರು.

ಭಾಷಾ ಅಲ್ಪಸಂಖ್ಯಾತ ಪ್ರದೇಶಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕನ್ನಡದಲ್ಲಿಯೂ ಮಾಹಿತಿ ಒದಗಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪಿ. ಪ್ರೇಮ್‌ರಾಜ್ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!